R Ashok Slams DK Shivakumar For Tearing Textbook | Karnataka Textbook Controversy | Vijay Karnataka

R Ashok Slams DK Shivakumar For Tearing Textbook | Karnataka Textbook Controversy | Vijay Karnataka

ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಣೆ ಮಾಡಿದ ಪಠ್ಯದ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಿದು ಹಾಕಿದ್ದು ತಪ್ಪು ಎಂದು ಕಂದಾಯ ಸಚಿವ ಆರ್.‌ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶೋಕ್, ಪಠ್ಯ ಪರಿಷ್ಕರಣೆ ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ನಡೆದಿದ್ದ ಪ್ರತಿಭಟನೆಯಲ್ಲಿ
ಪರಿಷ್ಕೃತಗೊಂಡ ಪಠ್ಯದ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಿದು ಹಾಕಬಾರದಿತ್ತು. ಅದರಲ್ಲಿ ಕೆಂಪೇಗೌಡರ ಕುರಿತಾದ ಅಧ್ಯಾಯ ಇತ್ತು. ಇದನ್ನು ಹರಿದು ಹಾಕಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಪಠ್ಯ ಪರಿಷ್ಕರಣೆ ಕುರಿತಾಗಿ ಬರೆದ ಪತ್ರಕ್ಕೆ ಸಿಎಂ ಶುಕ್ರವಾರ ಉತ್ತರ ನೀಡುತ್ತಾರೆ ಎಂದು ಅಶೋಕ್ ಇದೇ ವೇಳೆ ಸ್ಪಷ್ಟಪಡಿಸಿದರು.ಸಮಿತಿಯಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಸದಸ್ಯರಿದ್ದಾರೆ ಎಂಬ ಆರೋಪಕ್ಕೆ, ಪಠ್ಯ ಪರಿಷ್ಕರಣೆ ಸಮಿತಿ ಯಾವುದೇ ಪೂರ್ವಾಗ್ರಹ ಇಲ್ಲದೆ ರಚನೆ ಮಾಡಲಾಗಿದೆ. ಈ ಬಗ್ಗೆಯೂ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಅಶೋಕ್ ಸ್ಪಷ್ಟಪಡಿಸಿದರು.


ಪಠ್ಯ ಪರಿಷ್ಕರಣೆಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್ ವಿಶ್ವನಾಥ್ ಅವರಿಂದಲೂ ವಿರೋಧ ವ್ಯಕ್ತವಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚುವ ಅಶೋಕ್, ವಿಶ್ವನಾಥ್ ಅವರ ಬಗ್ಗೆ ಪಕ್ಷ ಸೂಕ್ತ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

#DKShivakumar #rashok #karnatakatextbookrow

Our Website : https://Vijaykarnataka.com
Facebook: https://www.facebook.com/VijayKarnataka/
Twitter: https://twitter.com/vijaykarnataka

r ashok slams dk shivakumarr ashokdk shivakumar

Post a Comment

0 Comments